ಉಡುಪಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್ ಕ್ಲಬ್ ಅಮೃತ್ ಹಾಗೂ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಸೆ.21ರಂದು ಬೆಳಗ್ಗೆ 9:30ಕ್ಕೆ ಉಡುಪಿಯ ಅಮೃತ್ ಗಾರ್ಡನ್‌ನಲ್ಲಿನಡೆಯಲಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ