ಉಡುಪಿ :- ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಉಡುಪಿಯ ಎಂಟಿಆರ್ ಹೋಟೆಲ್ ಸಮೀಪದ ನಡೆದಿದೆ.
ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ಆಲ್ಟೋ ಕಾರ್ ನಲ್ಲಿ ತೆರಳುವಾಗ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕಾರ್ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಅವರು ಕಾರ್ ಅನ್ನು ರಸ್ತೆ ಬದಿಗೆ ನಿಲ್ಲಿಸಿ ಹೊರಗೆ ಬಂದಿದ್ದಾರೆ.
ಕಾರ್ ಮುಂಭಾಗದಲ್ಲಿ ಬೆಂಕಿ ಹೊತ್ತಿ ಉರಿದಿದ್ದು, ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.
.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ