Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸೆ.21ರಿಂದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

Udupinews



ಉಡುಪಿ:- ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಜಂಟಿ ಆಶ್ರಯ ದಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಯನ್ನು ಸಂಘಟಿಸಲಾಗಿದ್ದು, ತಾಲೂಕು ಮಟ್ಟದ ಕ್ರೀಡೆಗಳಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಸ್ಪರ್ಧೆಗಳ ವಿವರ: ಸೆ.21ರಂದು ಬೆಳಗ್ಗೆ 9 ಗಂಟೆಗೆ ಎಂಜಿಎಂ ಕಾಲೇಜಿನಲ್ಲಿ ಬಾಸ್ಕೆಟ್‌ಬಾಲ್ ಹಾಗೂ ಸಂತ ಸಿಸಿಲಿ ಪ್ರೌಢ ಶಾಲೆಯಲ್ಲಿ ಹ್ಯಾಂಡ್‌ಬಾಲ್ ಮತ್ತು ಬಾಲ್‌ಬ್ಯಾಡ್ಮಿಂಟನ್ ಸ್ಪರ್ಧೆಗಳು. ಸೆ.22ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರ ಕಾಡಿನ ಒಳಾಂಗಣ ಕ್ರೀಡಾಂಗಣದಲ್ಲಿ ಟೇಬಲ್‌ಟೆನಿಸ್ ಮತ್ತು ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ಧೆ, ಸೆ.23ರಂದು ಅಪರಾಹ್ನ 2:00 ಗಂಟೆಗೆ ಮಣಿಪಾಲದ ಎಂಜೆಸಿಯಲ್ಲಿ ಫುಟ್‌ಬಾಲ್ ಹಾಗೂ 3:00 ಗಂಟೆಗೆ ಬ್ರಹ್ಮಾವರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ-ಖೋ. 

ಸೆ.24ರಂದು ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9:00 ಗಂಟೆಗೆ ಕಬ್ಬಡಿ ಹಾಗೂ ವಾಲಿಬಾಲ್ ಹಾಗೂ ಸೆ.25ರಂದು ಅಥ್ಲೆಟಿಕ್ಸ್, ತ್ರೋಬಾಲ್, ಕುಸ್ತಿ ಹಾಗೂ ಯೋಗ ಸ್ಪರ್ಧೆಗಳು ನಡೆಯಲಿವೆ. ಈಜು, ನೆಟ್‌ಬಾಲ್ ಮತ್ತು ಟೆನಿಸ್‌ಗೆ ವಿಭಾಗ ಮಟ್ಟದ ಆಯ್ಕೆಯನ್ನು ಸೆ.25ರಂದು ನಡೆಸಲಾಗುವುದು. 

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820- 2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo