ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಜಾಮೀನು ಕೋರಿ ನಟ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನಟ ದರ್ಶನ್ ಪರ ವಕೀಲರು ಇಂದು ಕೋರ್ಟ್ ಗೆ ಅಂತಿಮವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ದರ್ಶನ್ ವಿರುದ್ಧ ಈಗಾಗಲೇ ತನಿಖೆ ನಡೆಸಿದ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.ತನಿಖಾಧಿಕಾರಿಗಳು ತಾಂತ್ರಿಕ ಸಾಕ್ಷ್ಯಾಧಾರ, ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯದ ಉಳಿದ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.ಇದರ ನಡುವೆ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ