ರಾಜ್ಯದಲ್ಲಿ ಭಾರಿ ಸುದ್ದಿಯಾದ 'ಮುಡಾ' ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದ್ದು, ಅಂತೆಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ.ಎಫ್ ಐ ಆರ್ ದಾಖಲಿಸಲು ಎಡಿಜಿಪಿ ಮನಿಷ್ ಖರ್ಬಿಕರ್ ಸೂಚನೆ ನೀಡಿದ್ದರು.
ಮುಡಾ ಹಗರಣ ತನಿಖೆಗೆ ಅರ್ಹ ಎಂದು ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಆದೇಶಿಸಿತ್ತು. ಗುರುವಾರ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆದಿದ್ದು, ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಖಾಸಗಿ ದೂರಿನಲ್ಲಿ ಉಲ್ಲೇಖಿಸಿದಂತೆ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಲ್ಲದೇ ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಕೂಡ ಆರಂಭವಾಗಲಿದೆ ಎಂದು ಹೇಳಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ