ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತರ, ನಾಳೆ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.
ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಿದ್ದಾರೆ. ಈ ಮೂಲಕ ಮುಡಾ ಹಗರಣದ ಸಿಎಂ ಭವಿಷ್ಯ ನಾಳೆ ನಿರ್ಧಾರವಾಗಲಿದೆ.
👍🏼
ಪ್ರತ್ಯುತ್ತರಅಳಿಸಿ