ಉಡುಪಿ : ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ ವರುಣ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಕಮಿಷನ್ ಹಣಕ್ಕಾಗಿ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸಿ ಅದನ್ನು ಸಂತೋಷನಿಗೆ ನೀಡುತ್ತಿರುವುದಾಗಿ ತಿಳಿಸಿದ್ದಾನೆ.
ಆಟಕ್ಕೆ ಸಂಗ್ರಹಿಸಿದ್ದ ನಗದು ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ