Slider


ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ಗೆ ಐಟಿ ವಿಚಾರಣೆ ಬಿಸಿ : ಜೈಲಿನಲ್ಲೇ 7 ಗಂಟೆ ಐಟಿ ಅಧಿಕಾರಿಗಳಿಂದ ತೀವ್ರ ವಿಚಾರಣೆ

Udupinews

 





ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ಗೆ ಐಟಿ ವಿಚಾರಣೆ ಬಿಸಿ ತಟ್ಟಿದ್ದು, ಜೈಲಿನಲ್ಲೇ 7 ಗಂಟೆ ಡ್ರಿಲ್ ನಡೆದಿದೆ. 

ರೇಣುಕಾಸ್ವಾಮಿ ಕೊಲೆ ಬಳಿಕ ಶವ ವಿಲೇವಾರಿ, ಸಾಕ್ಷ್ಯ ನಾಶಕ್ಕಾಗಿ ದರ್ಶನ್ ಲಕ್ಷ ಲಕ್ಷ ಕಾಸು ನೀಡುವ ಭರವಸೆ ನೀಡಿದ್ದರು. ಈ ಸಂಬಂಧ ಆದಾಯ ತೆರಿಗೆ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲೇ ಇಂದು ದರ್ಶನ್‌ರನ್ನು 7 ಗಂಟೆ ಕಾಲ ವಿಚಾರಣೆಗೆ ಒಳಪಡಿಸಿದರು. ರೇಣುಕಾಸ್ವಾಮಿ ಕೊಲೆ ಆದ ಬಳಿಕ ಮನೆಯಲ್ಲಿ ಅಷ್ಟೊಂದು ಹಣ ಹೇಗೆ ಬಂತು? ಆ ಹಣ ಯಾರಿಗೆ ಸೇರಿದ್ದು? ಆ ಹಣವನ್ನು ನಿಮಗೆ ತಂದುಕೊಟ್ಟಿದ್ಯಾರು? ಹೀಗೆ ಹತ್ತು ಹಲವು ಪ್ರಶ್ನೆಗಳನ್ನು ಐಟಿ ಅಧಿಕಾರಿಗಳು ದರ್ಶನ್‌ಗೆ ಕೇಳಿದ್ದಾರೆ.

ಐಟಿ ಅಧಿಕಾರಿಗಳು ದರ್ಶನ್‌ ಅವರನ್ನು ವಿಚಾರಣೆ ಒಳಪಡಿಸುತ್ತಾರೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ಪರ ಅಡಿಟರ್ ಎಂ ಎಸ್ ರಾವ್ ಮತ್ತು ಅಸಿಸ್ಟೆಂಟ್ ಅರುಣ್ ಇಬ್ಬರು ನಿನ್ನೆ ಬೆಳಿಗ್ಗೆ 10:50 ಕ್ಕೆ ಜೈಲಿಗೆ ಬಂದಿದ್ದರು. ಎರಡು ಕಾರುಗಳಲ್ಲಿ ಆಗಮಿಸಿದ ಅಧಿಕಾರಿಗಳು ನಿನ್ನೆ ಮಧ್ಯಾಹ್ನ 12:20ಕ್ಕೆ ಜೈಲು ಪ್ರವೇಶಿಸಿ ಜೈಲು ಅಧೀಕ್ಷಕರ ಕೊಠಡಿಯಲ್ಲಿ ಸಿಸಿ ಕ್ಯಾಮರಾಗಳ ಕಣ್ಗಾವಲಿನಲ್ಲಿ ವಿಚಾರಣೆ ನಡೆಸಿದರು.

ಕೊಲೆ ಪ್ರಕರಣದಲ್ಲಿ ಬಳಿಕೆಯಾದ ಒಟ್ಟು ಹಣದ ಬಗ್ಗೆ ವಿಚಾರಣೆ ನಡೆಸಿದ ಐಟಿ ಅಧಿಕಾರಿಗಳು, ಹಣದ ಮೂಲದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಯಾವ ಅಕೌಂಟ್‌ಗಳ ಮೂಲಕ ಹಣ ವ್ಯವಹಾರ ನಡೆದಿದೆ ಎನ್ನುವದರ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo