Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

Udupinews





ಬೆಂಗಳೂರು:- ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇದೀಗ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದು, ಕಗ್ಗಲಿಪುರ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಆರ್‌ಆರ್‌ ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ. ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ, ಎರಡು ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಗುರುವಾರ ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ. ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. 354 a, 354 c, 376(2), 308, 406, 384, 120b 504, 506, 149 IPC ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo