Slider

ಮಂಗಳೂರು:- ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು

Udupinews





ಮಂಗಳೂರು ನಗರದ ಕಂಕನಾಡಿಯ ಬೆಂದೂರ್ ವೆಲ್ನಲ್ಲಿರುವ "ಫ್ಲೋಂಟ್" ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ಮೃತಪಟ್ಟವರನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ. ಮಾಝಿನ್ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲು ಶನಿವಾರ ಬೆಳಗ್ಗೆ "ಫ್ಲೋಂಟ್" ಕ್ಲಿನಿಕ್ ಗೆ ಕ್ಲಿನಿಕ್ ಗೆ ತೆರಳಿದ್ದರು. ಅರ್ಧ ಗಂಟೆಯಲ್ಲಿ ಮುಗಿಯಬಹುದಾಗಿದ್ದ ಸಣ್ಣ ಶಸ್ತ್ರ ಚಿಕಿತ್ಸೆಯು ಸಂಜೆಯಾದರೂ ಮುಗಿಯಲಿಲ್ಲ ಎನ್ನಲಾಗಿದೆ. ತಕ್ಷಣ ಅಲ್ಲಿಂದ ಕೋಡಿಯಾಲ್ ಬೈಲ್ ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷಿಸಿದ ವೈದ್ಯರು ಮಾಝಿನ್ ಮೃತಪಟ್ಟಿರುವುದಾಗಿ ಘೋಷಿಸಿದರು.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo