ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಮಡಾ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ದೂರುದಾರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಮುಂದಿನ ವಾರ ಹೈಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ನಡೆಸುವ ಸಾಧ್ಯತೆಯಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಮುಂದಿನ ವಾರ ನಾನು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬರಬಹುದು. ಇಂತಹ ಪ್ರಕರಣದಲ್ಲಿ ಪ್ರಭಾವ ಬೀರುವ ಸಾಧ್ಯತೆಯಿದೆ. ಹೀಗಾಗಿ ಹೀಗಾಗಿ ಸಿಎಂ ವಿರುದ್ಧದ ಪ್ರಕರಣವನ್ನ ಸಿಬಿಐ ತನಿಖೆ ಮಾಡಬೇಕು. 50 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಹಗರಣಗಳನ್ನ ಸಿಬಿಐ ತನಿಖೆ ಮಾಡಬೇಕೆಂಬ ನಿರ್ದೇಶನ ಇದೆ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ