Slider


ಕುಂದಾಪುರ: ಮನೆಯ ಅಂಗಳಕ್ಕೆ ನುಗ್ಗಿ ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ; ಸ್ಥಳೀಯರಲ್ಲಿ ಆತಂಕ

Udupinews

 





ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ನೈಲಾಡಿಯಲ್ಲಿ ಚಿರತೆಯೊಂದು ಮನೆಯ ಅಂಗಳಕ್ಕೆ ನುಗ್ಗಿ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ಸೆ. 25 ರಂದು ಬುಧವಾರ ಮುಂಜಾನೆ ನಡೆದಿದೆ.

ನೈಲಾಡಿ ಸದಾಶಿವ ಕುಲಾಲ್ ಅವರ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆಯೊಂದು ಮನೆಯ ಸಾಕು ನಾಯಿಯನ್ನು ಕ್ಷಣಾರ್ಧದಲ್ಲಿ ಹೊತ್ತು ಕೊಂಡು ಹೋಗಿದ್ದು ಇದನ್ನು ಕಂಡು ಮನೆಯವರು ಭಯಭೀತರಾಗಿದ್ದಾರೆ.

ಚಿರತೆ ಬಂದು ನಾಯಿಯನ್ನು ಹೊತ್ತುಕೊಂಡು ಹೋಗುವ ದ್ರಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಹಿಂದಿನಿಂದಲೂ ಚಿರತೆ ಕಾಟ ವಿಪರೀತ ಆಗಿದ್ದು ಈ ಘಟನೆಯಿಂದ ಜನರಲ್ಲಿ ಭೀತಿ ಹುಟ್ಟಿಸಿದೆ. ಸಾರ್ವಜನಿಕರು ರಾತ್ರಿ ಸಂಚರಿಸುವುದೇ ಕಷ್ಟಕರವಾಗಿದೆ. ಇದರ ಬಗ್ಗೆ ಅರಣ್ಯ ಇಲಾಖೆಯವರು ಕೂಡಲೇ ಎಚ್ಛೆತ್ತುಕೊಂಡು ಬೋನನ್ನು ಇಟ್ಟು ಚಿರತೆಯನ್ನು ಹಿಡಿಯಲು ಜನರು ಆಗ್ರಹಿಸಿದ್ದಾರೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo