ಉಡುಪಿ: ಜಿಲ್ಲಾಡಳಿತ, ಜಿ.ಪಂ. ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ 28 ಮತ್ತು 29ರಂದು ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸೆಪ್ಟೆಂಬರ್ 28ರಂದು ಬೆಳಗ್ಗೆ 9ಕ್ಕೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಉದ್ಘಾಟಿಸಲಿದ್ದಾರೆ.
ಸೆಪ್ಟೆಂಬರ್ 28ರಂದು ಬೆಳಗ್ಗೆ 9ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಆಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ವೇಟ್‌ಲಿಫ್ಟಿಂಗ್, ಕುಸ್ತಿ, ತ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಟೇಕ್ವಾಂಡೋ ಕ್ರೀಡಾಕೂಟ, ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಖೋ-ಖೋ ಹಾಗೂ ನೆಟ್‌ಬಾಲ್ ಕ್ರೀಡಾಕೂಟ, ಚಾಮರಾಜನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಫುಟ್‌ಬಾಲ್ ಹಾಗೂ ಹ್ಯಾಂಡ್‌ಬಾಲ್ ಕ್ರೀಡಾಕೂಟ, ಕೂಡಿಗೆ ಕ್ರೀಡಾಶಾಲೆಯಲ್ಲಿ ಹಾಕಿ, ಯೋಗ ಹಾಗೂ ಜಿಮ್ನಾಸ್ಟಿಕ್ಸ್ ಕ್ರೀಡಾಕೂಟ, ಚಿಕ್ಕಮಗಳೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ ಹಾಗೂ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 8ಕ್ಕೆ ವಾಲಿಬಾಲ್, ಕಬಡ್ಡಿ, ಟಿ.ಟಿ., ಟೆನ್ನಿಸ್ ಹಾಗೂ ಈಜು ಕ್ರೀಡಾಕೂಟ ಮತ್ತು ಸೆ. 29ರಂದು ಬೆಳಗ್ಗೆ 9ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಬಾಸ್ಕೆಟ್‌ಬಾಲ್ ಕ್ರೀಡಾಕೂಟ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ