
ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್ಸೊಂದರ ಚಾಲಕ ಪ್ರಿನ್ಸ್ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನ ಮತ್ತು ನಿರ್ಲಕ್ಷ್ಯತನದಿಂದ ಬಸ್ಸು ಚಲಾಯಿಸದ್ದು, ಆತನನ್ನು ತಪಾಸಣೆ ಮಾಡಿದಾಗಿ ಮದ್ಯ ಸೇವಿಸಿರುವುದು ದೃಢಪಟ್ಟಿದೆ.
ಚಾಲಕ ಪ್ರಿನ್ಸ್ ಬೆನ್ನಿ ವಿರುದ್ದ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ