ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಹೊರವಲಯದ ಉಳ್ಳಾಲದ ತಾಯಿ, ಮಗು ದಾರುಣ ಅಂತ್ಯ ಕಂಡಿದ್ದಾರೆ.
ಸೌದಿ ಅರೇಬಿಯಾದ ದಮಾಮ್ ಬಳಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದೆ. ಹೈದರ್ ಉಳ್ಳಾಲ್ ಅವರ ಪುತ್ರಿ ಸಫಾ ಫಾತಿಮಾ (30) ಹಾಗೂ ಎರಡೂವರೆ ವರ್ಷದ ಮೊಮ್ಮಗ ಮೃತ ದುರ್ದೈವಿಗಳಾಗಿದ್ದಾರೆ.
ಶುಕ್ರವಾರ ಸಂಜೆ ವೇಳೆ ಮದೀನದಿಂದ ಕಾರಿನಲ್ಲಿ ಸಫಾ ಫಾತಿಮಾ(30) ತನ್ನ ಪತಿ ಮಲಪುರಂ ಆರಿಕೋಡ್‌ನ ಸುಹೈಲ್ (35) ಮತ್ತು ಸಹೋದರ ಮುಹವಿಯ(23) ಎಂಬವರು ದಮಾಮ್ ನಲ್ಲಿರುವ ಹೈದರ್ ಉಳ್ಳಾಲ್ ಅವರ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರು ಅಪಘಾತವಾಗಿದೆ. ಕಾರಿನಲ್ಲಿದ್ದ ಸುಹೈಲ್, ಮಕ್ಕಳಾದ ಅಬ್ದುಲ್ ಮಲಿಕ್ (7), ಅಬ್ದುಲ್ ರಹಿಮಾನ್ (6) ಹಾಗೂ ಅಹ್ಮದ್ (5) ತೀವ್ರ ಗಾಯಗೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ