ಉಡುಪಿ:- ವಿದ್ಯುತ್ ಕಂಬಕ್ಕೆ ಶಾಲಾ ವಾಹವೊಂದು ಢಿಕ್ಕಿ ಹೊಡೆದ ಪರಿಣಾಮ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕನ ತಲೆಗೆ ಗಂಭೀರ ಗಾಯವಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಶಾಲಾ ವಾಹನ ಇದಾಗಿದ್ದು, ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಹೆದ್ದಾರಿಯಲ್ಲಿ ಬೈಕೊಂದಕ್ಕೆ ಢಿಕ್ಕಿ ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಹೈಮಾಸ್ಟ್ ವಿದ್ಯುತ್ ಕಂಬ ಮುರಿದುಬಿದ್ದಿದೆ. ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳು ಇಲ್ಲದೇ ಇದ್ದುದರಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ