ಕುಂದಾಪುರ: ಬೈಕ್‌ಗಳೆರಡು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಕುಂದಾಪುರ ನಗರದ ಬರೆಕಟ್ಟುವಿನ ಬಾಳೆಹಿತ್ತು ನಿವಾಸಿಯಾದ ಖಾಸಗಿ ಕಂಪನಿಯೊಂದರ ಉದ್ಯೋಗಿ ಶಶಾಂಕ್ ಮೊಗವೀರ 22 ಮೃತ ದುರ್ದೈವಿ.
ಶಶಾಂಕ್ ಮೊಗವೀರ ರಾತ್ರಿ 11.00 ರ ವೇಳೆಗೆ ಹಂಗಳೂರಿನ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಹಿಂತಿರುಗುವ ಸಮಯದಲ್ಲಿ ಅಪಘಾತ ನಡೆದಿದೆ. ತಕ್ಷಣ ಅವರನ್ನು ಮಣಿಪಾಲದ ಕೆಏಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಆದರೆ ಅಲ್ಲಿ ವೈದ್ಯರು ಶಶಾಂಕ್ ಮರಣ ಹೊಂದಿರುವುದನ್ನು ದೃಢಪಡಿಸಿದ್ದಾರೆ.
ಬುಲೆಟ್ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಗಂಭೀರ ಗಾಯಗೊಂಡಿದ್ದು ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ