ಬೆಂಗಳೂರು: ವಂಚನೆ ಪ್ರಕರಣದಲ್ಲಿ 'ಬಿಟಿವಿ' ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಜಿ.ಎಂ. ಕುಮಾರ್ ಅವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಹೆಚ್ಚಿನ ವಿಚಾರಣೆಗಾಗಿ ಐದು ದಿನ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಕುಮಾರ್ ಅವರು ಗುರುವಾರ ನ್ಯಾಯಾಲಯಕ್ಕೆ ಹಾಜರಾಗಲು ಬರುತ್ತಿದ್ದ ಅದೇ ವೇಳೆ ಅವರನ್ನು ವಶಕ್ಕೆ ಪಡೆಯಲಾಯಿತು.
'ಜಿ.ಎಂ.ಕುಮಾರ್ ವಿರುದ್ಧ ಅಶ್ವಿನ್ ಮಹೇಂದ್ರ ಅವರು ದೂರು ನೀಡಿದ್ದರು. ಐಪಿಸಿ ಸೆಕ್ಷನ್ 402 (ನಂಬಿಕೆ ದ್ರೋಹ) ಹಾಗೂ ಸೆಕ್ಷನ್ 420 (ವಂಚನೆ) ಆರೋಪದಡಿ ಕುಮಾರ್ ವಿರುದ್ಧ 2022ರಲ್ಲಿ ವಿಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು' ಎಂದು ಪೊಲೀಸರು ತಿಳಿಸಿದರು.
ಈ ಪ್ರಕರಣದಲ್ಲಿ ಕುಮಾರ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅಶ್ವಿನ್ ಮಹೇಂದ್ರ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ ಶರಣಾಗುವಂತೆ ಕುಮಾರ್ ಅವರಿಗೆ ಸೂಚಿಸಿತ್ತು. ಅವರು ತಲೆಮರೆಸಿಕೊಂಡು ಓಡಾಡುತ್ತಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ