Slider


ಜಮೀ‌ರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ: ಉಡುಪಿಯಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಹೇಳಿಕೆ

Udupinews

 





ಉಡುಪಿ: ಮುಡಾ ಪ್ರಕರಣದಲ್ಲಿ ನ್ಯಾಯಾಲಯ ನೀಡಿರುವ ತೀರ್ಪು ರಾಜಕೀಯ ಪ್ರೇರಿತ ಎಂದು ಹೇಳಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ದೂರುದಾರ ಟಿ.ಜೆ.ಅಬ್ರಹಾಂ ಹೇಳಿದ್ದಾರೆ.

ಉಡುಪಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಮುಡಾ ಪ್ರಕರಣದ ದೂರುದಾರರಲ್ಲೊಬ್ಬರಾದ, ಹಿರಿಯ ವಕೀಲ ಟಿಜೆ ಅಬ್ರಹಾಂ ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡುವುದು ಎಂದರೆ ಹುಡುಗಾಟನಾ. ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಸ್ಪಷ್ಟಪಡಿಸಿದರು.

ರಾಜಕಾರಣದಲ್ಲಿ ಭಾಷಣ ಬಿಗಿದ ಹಾಗೆ ಮಾತನಾಡಿದರೆ ಆಗುತ್ತಾ? ನಾಲಿಗೆ ಬಿಗಿಯಿಲ್ಲದೆ ಮಾತನಾಡಿದ್ದು ಸರಿಯಲ್ಲ. ಈ ತೀರ್ಪನ್ನು ಪೊಲಿಟಿಕಲ್ ಆದೇಶ ಎಂದು ಹೇಳುತ್ತಾರೆ. ನ್ಯಾಯಾಧೀಶರನ್ನು ರಾಜಕಾರಣಿಗಳ ಲೆವೆಲ್ಲಿಗೆ ಇಳಿಸುತ್ತೀರಾ? ನ್ಯಾಯಾಲಯ ದ ಬಗ್ಗೆ ಭಯ ಭಕ್ತಿ ಬೇಡ್ವಾ. ಯಾರ ಬಗ್ಗೆ ಮಾತನಾಡುತ್ತಿದ್ದೀರಿ ಗೊತ್ತಿದೆಯಾ. ನನ್ನ ಬಗ್ಗೆ ಮಾತನಾಡಿ ಪರ್ವಾಗಿಲ್ಲ. ನ್ಯಾಯಾಲಯದ ಬಗ್ಗೆ ಎಷ್ಟು ಕ್ಯಾಶುಯಲ್ ಆಗಿ ಮಾತಾಡ್ತೀರಾ. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo