ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ತಿರುಪತಿ ತಿಮ್ಮಪ್ಪನ ದೇವಸ್ಥಾನದ ಪ್ರಸಾದವಾದ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸ್ಟೋಟಕ ಹೇಳಿಕೆ ನೀಡಿದ ಬೆನ್ನಲ್ಲೇ, ಲ್ಯಾಬ್ ರಿಪೋರ್ಟ್ ಬಹಿರಂಗವಾಗಿದ್ದು, ವರದಿ ಬೆಚ್ಚಿಬೀಳಿಸಿದೆ.
ತಿರುಪತಿ ಪ್ರಸಾದ ತಯಾರಿಸಲು ದನದ ಕೊಬ್ಬು ಮತ್ತು ಮೀನಿನ ಎಣ್ಣೆಯನ್ನು ಬಳಸಿರುವುದಾಗಿ ದೃಢಪಟ್ಟಿದೆ ಎಂದು ವರದಿ ತಿಳಿಸಿದೆ.
ಆಂಧ್ರ ಪ್ರದೇಶದ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಬುಧವಾರ ಆರೋಪ ಮಾಡಿದ್ದರು. ಆದರೆ ಚಂದ್ರಬಾಬು ನಾಯ್ಡು ಅವರ ಆರೋಪವನ್ನು ವೈಎಸ್‌ಆರ್ ಕಾಂಗ್ರೆಸ್ ತಿರಸ್ಕರಿಸಿತ್ತು.
ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನದ ಪ್ರಸಾದವಾದ ಲಡ್ಡು ತಯಾರಿಸಲು ಬಳಸುತ್ತಿದ್ದ ತುಪ್ಪದಲ್ಲಿ ಗೋಮಾಂಸದ ಕೊಬ್ಬು ಮತ್ತು ಮೀನಿನ ಎಣ್ಣೆ ಸೇರಿದಂತೆ ಪ್ರಾಣಿಗಳ ಕೊಬ್ಬಿನ ಅಂಶಗಳಿವೆ ಲ್ಯಾಬ್ ವರದಿ ತಿಳಿಸಿದೆ. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಗುಜರಾತ್‌ನ ರಾಷ್ಟ್ರೀಯ ಡೈರಿ ಡೆವಲಪ್‌ಮೆಂಟ್ ಬೋರ್ಡ್‌ನಲ್ಲಿರುವ ಸೆಂಟರ್ ಆಫ್ ಅನಾಲಿಸಿಸ್ ಅಂಡ್ ಲರ್ನಿಂಗ್ ಇನ್ ಲೈವ್‌ಸ್ಟಾಕ್ ಅಂಡ್ ಫುಡ್ ಅಥವಾ ಕಾಫ್ (CALF) ಲ್ಯಾಬ್ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದೆ. ವೈಎಸ್‌ಆರ್‌ಸಿಪಿ ಅಧಿಕಾರದಲ್ಲಿದ್ದಾಗ ಪ್ರಸಿದ್ಧ ತಿರುಪತಿ ಲಡ್ಡೂಗಳನ್ನು ತಯಾರಿಸಲು ಬಳಸಿದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾಗಿದೆ ಎಂದು ಹೇಳಿದೆ, ಮೀನಿನ ಎಣ್ಣೆ, ದನದ ಕೊಬ್ಬು ಮತ್ತು ಹಂದಿ ಕೊಬ್ಬಿನ ಅಂಶಗಳು ಪತ್ತೆಯಾಗಿವೆ ಎಂದು ದೃಢಪಡಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ