Slider

ಕರಾವಳಿ ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೆ.24ರಿಂದ ಮತ್ತೆ ಮಳೆ ಸಾಧ್ಯತೆ

Udupinews

 




ಕರಾವಳಿ, ಮಲೆನಾಡು ಸೇರಿ ಉತ್ತರ ಒಳನಾಡಿನಲ್ಲಿಸೆಪ್ಟೆಂಬರ್ 24ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಒಣಹವೆ ಇತ್ತು. ಬೆಂಗಳೂರಿನ ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನು ಬೆಂಗಳೂರು ನಗರ ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಒಣ ಹವಾಮಾನ ಮುಂದುವರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿ.ಸೆ ಇರಲಿದೆ.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo