ಕುಂದಾಪುರ: ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಬಿ.ಕಾಂ ಪದವೀಧರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಉಡುಪಿಯ ಕೃಷ್ಣರಾಜ (31) ಎಂದು ಗುರುತಿಸಲಾಗಿದೆ.
ಇವರು ಬಿ.ಕಾಂ ವ್ಯಾಸಂಗ ಮುಗಿಸಿ ಬೆಂಗಳೂರಿನಲ್ಲಿ ಖಾಸಗೀ ಕಂಪೆನಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದರು.
ಕಳೆದ 6 ತಿಂಗಳಿಂದ ಕೆಲಸವಿಲ್ಲದೇ ಊರಿಗೆ ಬಂದಿದ್ದು ಇತ್ತೀಚೆಗೆ ಸುಮಾರು 3 ತಿಂಗಳಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 33/2024 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ