ಕೊಲ್ಲೂರು:- ಖಾಸಗಿ ಬಸ್ ಮತ್ತು ಟೆಂಪೋ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಘಟನೆ ಕೊಲ್ಲೂರು ಬಳಿಯ ಹಾಲ್ಕಲ್ ಎಂಬಲ್ಲಿ ನಡೆದಿದೆ.
ವಿಜಯಲಕ್ಷ್ಮಿ ಹೆಸರಿನ ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಟೆಂಪೋ ಪರಸ್ಪರ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಟೆಂಪೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ ಮಗುಚಿ ರಸ್ತೆಗೆ ಬಿದ್ದಿದ್ದು, ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ