Slider


ಉಡುಪಿ: ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬ; ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Udupinews





ಉಡುಪಿ: ವಕೀಲರ ಸಂಘವು ನವೆಂಬರ್ 17 ಮತ್ತು 18ರಂದು ಉಡುಪಿ ನ್ಯಾಯಾಲಯ ಆವರಣದಲ್ಲಿ ಆಯೋಜಿಸಿರುವ 'ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬ (125ನೇ ವಾರ್ಷಿಕೋತ್ಸವ) ಸಮಾರಂಭ'ದ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರನ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾ‌ರ್, ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬ ಕಾರ್ಯಕ್ರಮ ಸಮಿತಿಯ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ವಕೀಲರ ಸಂಘದ ಉಪಾಧ್ಯಕ್ಷ ಮಿತ್ರಕುಮಾರ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರೂ‌ರ್ ಸುಕೇಶ್ ಶೆಟ್ಟಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ. ನಾಗರಾಜ್ ಮತ್ತು ಹಿರಿಯ ನ್ಯಾಯವಾದಿ ಆನಂದ ಮಡಿವಾಳ ಉಪಸ್ಥಿತರಿದ್ದರು.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo