ನಾಗಮಂಗಲ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು ಮಡಿ ಮಂಡ್ಯ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ತಲಾ ಒಂದು ಲಕ್ಷ ಮೌಲ್ಯದ ಬಾಂಡ್, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಪ್ರತಿ ಭಾನುವರ ಠಾಣೆಗೆ ತೆರಳಿ ಸಹಿ, ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗದಂತೆ ಷರತ್ತು ವಿಧಿಸಿ, ಜಾಮೀನು ಮಂಜೂರು ಮಾಡಲಾಗಿದೆ. ಸೋಮವಾರ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ, ಗಲಭೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ ನಡೆದಿತ್ತು. ಪ್ರಕರಣ ಸಂಬಂಧ 55 ಆರೋಪಿಗಳನ್ನು ಪೊಲಿಸರು ಬಂಧಿಸಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ