Slider


ಶಿರೂರು ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಅರ್ಜುನ್ ಮೃತದೇಹ ಪತ್ತೆ

Udupinews

 





ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿ ಎರಡು ತಿಂಗಳು ಕಳೆದಿದ್ದು, ಕೊನೆಗೂ ನಾಪತ್ತೆಯಾಗಿದ್ದ ಕೇರಳದ ಲಾರಿ ಹಾಗೂ ಚಾಲಕ ಅರ್ಜುನ್‌ ಅವರ ಮೃತದೇಹ ಬುಧವಾರ(ಸೆ.25ರಂದು) ಪತ್ತೆ ಆಗಿದೆ ಎಂದು ವರದಿಯಾಗಿದೆ.

ಕಳೆದ 6 ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಯ ಮೂಲಕ ಗಂಗಾವಳಿ ನದಿಯಲ್ಲಿ ಮುಳುಗಿದ್ದ ಅರ್ಜುನ್‌ ಅವರ ಲಾರಿ ಪತ್ತೆಯಾಗಿದ್ದು, ಲಾರಿಯೊಳಗೆ ಅರ್ಜುನ್‌ ಅವರ ಮೃತದೇಹ ಪತ್ತೆಯಾಗಿದೆ ಎಂದು ಕಾರ್ಯಾಚರಣೆಯ ತಂಡದ ಮೂಲಗಳು ತಿಳಿಸಿವೆ.

ಲಾರಿಯ ಮಾಲೀಕ ಮನಾಫ್‌ ಅವರು ಇದು ತಮ್ಮದೆ ಲಾರಿಯೆಂದು ಗುರುತಿಸಿದ್ದು, ಲಾರಿಯೊಳಗೆ ಮೃತದೇಹ ಪತ್ತೆಯಾಗಿದೆ. ಇದು ಅರ್ಜುನ್‌ ಅವರ ಮೃತದೇಹವೆಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ.











0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo