ಉಡುಪಿ:- ಚುನಾಯಿತ ಸರಕಾರವನ್ನು ಹೇಗಾದರೂ ಮಾಡಿ ಬೀಳಿಸಿ, ಸರಕಾರ ರಚಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯು ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಆರೋಪಿಸಿದೆ.
ಕೇಂದ್ರ ಸರಕಾರ ಕಳೆದ ಹತ್ತು ವರ್ಷಗಳಲ್ಲಿ ಐಟಿ, ಇಡಿ, ಸಿಬಿಐ ಬಳಸಿ 443 ವಿಪಕ್ಷದ ಶಾಸಕರನ್ನು ತನ್ನ ಪಕ್ಷಕ್ಕೆ ಸೇರಿಸಿಕೊಂಡಿದೆ. ಹಲವಾರು ಭ್ರಷ್ಟಾಚಾರ ಪ್ರಕರಣಗಳಿಂದ ಬೇಸತ್ತ ರಾಜ್ಯದ ಜನತೆ ಕಳೆದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ್ದರು. ಈಗ ಕಾಂಗ್ರೆಸ್ ಪಕ್ಷದ ಜನಪ್ರಿಯತೆಯನ್ನು ಸಹಿಸದೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ. ರಾಜ್ಯಪಾಲರು ಒಂದು ಅರ್ಜಿಯನ್ನು ಪಡೆಯುವಾಗ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಆದರೆ ರಾಜ್ಯಪಾಲರ ಕ್ರಮದಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದು ಕರಾಳ ದಿನವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ