Slider

ಸಿದ್ದರಾಮಯ್ಯ ವಿರುದ್ಧ ಇಡಿ ಕೇಸ್ ದಾಖಲಿಸಿದ್ದ ಬೆನ್ನಲ್ಲೇ ಸಿಎಂ ಪತ್ನಿ ಅಚ್ಚರಿ ನಿರ್ಧಾರ; 14 ನಿವೇಶನ ವಾಪಾಸ್

Udupinews

 





ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಅವರ ಪತ್ನಿ ಬಿ.ಎಂ. ಪಾರ್ವತಿ 14 ಸೈಟ್ ಗಳನ್ನು ಹಿಂತಿರುಗಿಸಲು ಮುಂದಾಗಿದ್ದಾರೆ.

ಮೈಸೂರಿನ ವಿಜಯನಗರದ ಮೂರು ಮತ್ತು ನಾಲ್ಕನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಪಾರ್ವತಿ ಅವರು ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯನವರಿಗೆ ರಾಜಕೀಯವಾಗಿ ಆಗುತ್ತಿರುವ ಸಂಕಷ್ಟ ನೋಡಲಾಗದ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ.

ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.

ಮುಂದುವರಿದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಪತ್ರ ಬರೆದಿದ್ದಾರೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo