ಉಡುಪಿ: ಕಾರಿನ ಬ್ರೇಕ್ ಫೇಲ್ ಆಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅ. 9 ರಂದು ಬುಧವಾರ ಇಂದ್ರಾಳಿಯಲ್ಲಿ ನಡೆದಿದೆ.
ಮೃತ ದುರ್ದೈವಿ ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ.
ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿ ದ್ವಿಚಕ್ರ ಸವಾರನಿಗೆ ಡಿಕ್ಕಿಹೊಡೆದು ಎರಡೂ ಬದಿಯಲ್ಲಿದ್ದ ವಾಹನಗಳ ಸಹಿತ ಜನರಿಗೆ ಕಾರು ಢಿಕ್ಕಿಯಾಗಿದೆ. ಕೆಲ ಮಂದಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ