ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಮುಡಾರು ರಾಮೆರುಗುತ್ತು ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಡಂಬಳ ನಿವಾಸಿ ಪಾಂಡುರಂಗ ಆಚಾರ್ಯ (57) ಅವರ ಮೇಲೆ ಕಾರು ಹರಿದು ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಇವರು ರಸ್ತೆ ಬದಿ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದಾಗ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆಯೇ ಹರಿದಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ