ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಛಾಟನೆಗೊಂಡ ಉಡುಪಿ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು , ಮತ್ತೇ ನನಗೆ ಭಾರತೀಯ ಜನತಾ ಪಕ್ಷಕ್ಕೆ ಮರಳಿ ಸೇರ್ಪಡೆಗೆ ಆಹ್ವಾನ ನೀಡಿದರೆ ಮರು ಸೇರ್ಪಡೆಗೆ ಸಿದ್ಧ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದರು.
ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪನರನ್ನ ಮರಳಿ ಬಿಜೆಪಿಗೆ ಸೇರ್ಪಡೆಗೆ ಚಿಂತನೆ ನಡೆದಿದ್ದು ನನ್ನ ಕರೆದರೂ ಹೋಗುವೆ ನನಗೆ ಯಾವುದೇ ಸಮಸ್ಯೆ ಇಲ್ಲ. ಖಂಡಿತವಾಗಿಯೂ ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ಆಗಿದ್ದೇನೆ. ಚುನಾವಣೆಯಲ್ಲಿ ಸೋಲಿಲಿ ಬಿಡಲಿ ಬಿಜೆಪಿ ಕಾರ್ಯಕರ್ತನಾಗಿ ಇರುವೆ ಎಂದು ಆವಾಗಲೇ ಹೇಳಿದ್ದೆಈಗಲೂ ಹಾಗೇ ಇದ್ದೇನೆ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ