ಕಟಪಾಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಉಡುಪಿಯಿಂದ ಬರುತ್ತಿದ್ದ ಕಾರು ಸರ್ವೀಸ್ ರಸ್ತೆಯಲ್ಲಿನ ಹಂಪ್ಸ್ ಮೇಲೇರಿದ ಬಳಿಕ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ದಾಟಿ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್, ಓಮ್ನಿ, ಅಂಗಡಿ ಬಳಿ ಪಾರ್ಕಿಂಗ್ ಮಾಡಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ವಾಹನಗಳು ಜಖಂಗೊಂಡಿವೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ