ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ.
ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು.
ಉಪ ಚುನಾವಣೆಗೆ ಅ. 3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅ.21ರಂದು ಮತದಾನ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಅವರ ಹೆಸರನ್ನು ಪ್ರಕಟಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ