ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿ ವಿಲವಿಲ ಒದ್ದಾಡುತ್ತಿರುವಂತೆಯೇ ಬದಲಿ ಸಿಎಂ ವದಂತಿಗಳಿಗೆ ಇನ್ನಷ್ಟು ಪುಷ್ಟಿ ದೊರೆತಿದೆ. ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿರುವುದು ಇನ್ನಷ್ಟು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.
ಒಂದು ವೇಳೆ ಸಿಎಂ ಸಿದ್ದರಾಮಯ್ಯ ಪದಚ್ಯುತಗೊಂಡರೆ, ಈಗಾಗಲೇ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಜಾರಕಿಹೊಳಿ ತಮ್ಮ ಸ್ಥಾನವನ್ನು ಖಾಯಂಗೊಳಿಸಲು ಲಾಬಿಯಲ್ಲಿ ತೊಡಗಿದ್ದಾರೆನ್ನಲಾಗಿದ್ದು, ಈ ಚಟುವಟಿಕೆಯ ಅಂಗವಾಗಿ ದೆಹಲಿಗೆ ತೆರಳಿ ವರಿಷ್ಠರ ಆಶೀರ್ವಾದ ಪಡೆಯುವ ಯತ್ನದಲ್ಲಿದ್ದಾರೆನ್ನಲಾಗಿದೆ.
ಎರಡು ದಿನಗಳ ಹಿಂದಷ್ಟೇ ಈ ಕುರಿತು ಪ್ರತಿಕ್ರಿಯಿಸಿದ್ದ ಸತೀಶ್ ಜಾರಕಿಹೊಳಿ, ನಮ್ಮಲ್ಲಿ ಪ್ಲಾನ್ ಬಿ ಅಂತ ಏನೂ ಇಲ್ಲ. ಪ್ಲಾನ್ ಸಿ ಮಾತ್ರ ರೆಡಿಯಾಗಿದೆ ಎನ್ನುವ ಮೂಲಕ ಪರೋಕ್ಷ ಸುಳಿವು ನೀಡಿದ್ದರು. ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜಿ. ಪರಮೇಶ್ವರ್ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ