ಟಾಟಾ ಸನ್ಸ್ ಗೌರವಾಧ್ಯಕ್ಷ ರತನ್ ನಾವಲ್ ಟಾಟಾ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಜೀವ ಚಿಕಿತ್ಸೆಗಾಗಿ ಮೊನ್ನೆಯಷ್ಟೇ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.
ಇಂದು ಮುಂಜಾನೆ ನಿಧನರಾದ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸಲು ಸಾರ್ವಜನಿಕರಿಗೆ ವ್ಯವಸ್ಥೆ ಮಾಡುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ದಿವಂಗತ ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್‌ಸಿಪಿಎ) ಗೆ ಕೊಂಡೊಯ್ಯಲಾಗುವುದು, ಅಲ್ಲಿ ಸಾರ್ವಜನಿಕರು ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಶ್ರದ್ಧಾಂಜಲಿ ಸಲ್ಲಿಸಬಹುದು. ಸಾರ್ವಜನಿಕ ದರ್ಶನದ ನಂತರ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು.
ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶರಾದ ಸುದ್ದಿ ಕೇಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ, ಹಿರಿಯ ಚೇತನಕ್ಕೆ ಅಶೃತರ್ಪಣ ಸಲ್ಲಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ