ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿ, ನಕಲಿ ಚಿನ್ನಾಭರಣಗಳನ್ನು ದೇವಸ್ಥಾನದಲ್ಲಿ ಇರಿಸಿದ್ದ.
ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ದೇವಸ್ಥಾನದ ಚಿನ್ನಾಭರಣಗಳನ್ನು ವಿವಿಧ ಬ್ಯಾಂಕ್ ಹಾಗೂ ಸೊಸೈಟಿಗಳಲ್ಲಿ ಅಡಮಾನವಿರಿಸಿರುವುದಾಗಿ ತಿಳಿಸಿದ್ದಾನೆ. ಆರೋಪಿಯಿಂದ 40 ಗ್ರಾಂ ತೂಕದ ಚಿನ್ನದ ಜೋಬಿನ ಸರ ,73 ಗ್ರಾಂ ತೂಕದ ಚಿನ್ನದ ಕಾಸಿ ತಾಳಿ ಸರ , 73 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 6 ಗ್ರಾಂ ತೂಕದ 3 ಚಿನ್ನದ ತಾಳಿ, 64 ಗ್ರಾಂ ತೂಕದ ಚಿನ್ನದ ನಕ್ಲೇಸ್ ಸರ ಹೀಗೆ ಒಟ್ಟು 20,48,000 ರೂ. ಮೌಲ್ಯದ 256 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯನ್ನು ಸದ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ