Slider


ಉಡುಪಿ: ಬೆಳ್ಳಂಬೆಳಗ್ಗೆ ಸ್ನೇಹಿತನಿಂದಲೇ ಯುವಕನ ಕಿತ್ತು ಸೀಳಿ ಕೊಲೆ

Udupinews

 







ಉಡುಪಿ: ಬೆಳ್ಳಂಬೆಳಗ್ಗೆ ಸ್ನೇಹಿತನಿಂದಲೇ ಯುವಕನ ಕಿತ್ತು ಸೀಳಿ ಕೊಲೆ 


ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

 ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ.

CLICK HERE SHOP NOW

ಕಂಠಪೂರ್ತಿ ಕುಡಿದು ಇಬ್ಬರು ಜಗಳವಾಡಿಕೊಂಡಿದ್ದು, ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ನ ಕತ್ತು ಸೀಳಿದ್ದಾನೆ.ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಕತ್ತು ಸೀಳಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ್ದಾರೆ.

 ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದೆ ಅಂತಾ ಕಂಡುಬಂದರೂ ಕೂಡ ಕೊಲೆಗೆ ಬೇರೆ ಏನಾದರೂ ಕಾರಣ ಇದೆಯೇ ಎಂಬುವುದನ್ನ ತನಿಖೆಯ ತಿಳಿದುಬರಬೇಕಿದೆ.











0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo