ಉಡುಪಿ: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯೊಂದಕ್ಕೆ ಸಿಡಿಲು ಬಡಿದು ಬಾಲಕಿಯೊಬ್ಬಳು ಗಾಯಗೊಂಡ ಘಟನೆ ಪೆರಂಪಳ್ಳಿಯಲ್ಲಿ ಸೋಮವಾರ ರಾತ್ರಿ ವೇಳೆ ನಡೆದಿದೆ.
ಉಡುಪಿಯ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಈ ಸಂದರ್ಭ ಪೆರಪಂಳ್ಳಿಯ ಕಮಲ ಪೂಜಾರ್ತಿ ಎಂಬವರ ಮನೆಗೆ ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ 9ನೇ ತರಗತಿಯ ವಿದ್ಯಾರ್ಥಿನಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅದೇ ರೀತಿ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆಯ ಹೆಂಚು, ವಿದ್ಯುತ್ ಸಲಕರಣೆಗಳು, ಟಿವಿ ಸೇರಿದಂತೆ ಇಲೆಕ್ಟ್ರಾನಿಕ್ಸ್ ವಸ್ತುಗಳಿಗೆ ಹಾನಿಯಾಗಿದೆ. ಇದರಿಂದ ಅಪಾರ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ