" ಈಶಾ ಫೌಂಡೇಶನ್ " ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್
ಸದ್ಗುರು ಖ್ಯಾತಿಯ ಜಗ್ಗಿ ವಾಸುದೇವ್‌ಗೆ ಭಾರೀ ನಿರಾಳವಾಗಿದ್ದು, ಈಶಾ ಫೌಂಡೇಶನ್ ವಿರುದ್ಧದ ಅಕ್ರಮ ಬಂಧನದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ.
ಆಶ್ರಮದಲ್ಲಿ ಸ್ವಯಂಪ್ರೇರಣೆಯಿಂದ ನೆಲೆಸಿದ್ದೇವೆ ಎಂಬ ಇಬ್ಬರು ಮಹಿಳೆಯರ ಹೇಳಿಕೆಗಳ ಹಿನ್ನೆಲೆಯಲ್ಲಿ ಈಶಾ ಫೌಂಡೇಶನ್ ವಿರುದ್ಧದ ಅಕ್ರಮ ಬಂಧನದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಅಂತ್ಯಗೊಳಿಸಿದ್ದು, ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ವಜಾಗೊಳಿಸಿದೆ.
ಕೊಯಮತ್ತೂರಿನ ಆಶ್ರಮದ ಆವರಣದೊಳಗೆ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬಂಧಿಯಾಗಿ ಇರಿಸಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಹೇಬಿಯಸ್ ಕಾರ್ಪಸ್ ಮನವಿಯನ್ನು ಆಧರಿಸಿ ಪೊಲೀಸ್ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್ ಕ್ರಮವನ್ನು ಟೀಕೆ ಮಾಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ