ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭವಾಗಲಿದೆ. ಅಕ್ಟೋಬರ್ 3 ರಂದು ನವದುರ್ಗೆಯರು ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸವ ಪ್ರಾರಂಭವಾಗಲಿದೆ. ಕುದ್ರೋಳಿಯಲ್ಲಿ ಅಕ್ಟೋಬರ್ 3 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ನವದುರ್ಗೆ ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆ ನಡೆಯಲಿದೆ.
ಅಕ್ಟೋಬರ್ 13 ರಂದು ಸಂಜೆ 4 ಗಂಟೆಯಿಂದ ಶಾರಾದಾ ಮಾತೆ ಹಾಗೂ ನವದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.
ಶೋಭಾಯಾತ್ರೆಯಲ್ಲಿ ಡಿಜೆ ಹಾಗು ದೈವಾರಾಧನೆಯ ಸ್ತಬ್ಧಚಿತ್ರಕ್ಕೆ ಕುದ್ರೋಳಿ ಆಡಳಿತ ಮಂಡಳಿ ಮತ್ತು ಪೊಲೀಸ್ ಇಲಾಖೆಯಿಂದ ಕೂಡ ಅವಕಾಶ ಇಲ್ಲ. ಡ್ರಗ್ಸ್ , ವ್ಯಸನ ಹಾಗು ಡಿಜೆ ಮುಕ್ತ ಮಂಗಳೂರು ದಸರಾಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಪದ್ಮರಾಜ್ ಆರ್ ಪೂಜಾರಿ ಮಾಧ್ಯಮದ ಮೂಲಕ ತಿಳಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ