Slider


ಯಡಿಯೂರಪ್ಪ ಹೆಂಡತಿ ಸಾವಿಗೆ ಶೋಭಾ ಕರಂದ್ಲಾಜೆ ಕೈವಾಡ: ಸಚಿವ ಭೈರತಿ ಸುರೇಶ್ ಆರೋಪಕ್ಕೆ ವಿಜಯೇಂದ್ರ ಕೆಂಡಾಮಂಡಲ

Udupinews

 






ಯಡಿಯೂರಪ್ಪ ಹೆಂಡತಿ ಸಾವಿಗೆ ಶೋಭಾ ಕರಂದ್ಲಾಜೆ ಕೈವಾಡ: ಸಚಿವ ಭೈರತಿ ಸುರೇಶ್ ಆರೋಪಕ್ಕೆ ವಿಜಯೇಂದ್ರ ಕೆಂಡಾಮಂಡಲ 


ಯಡಿಯೂರಪ್ಪ ಹೆಂಡತಿ ಸಾವಿಗೆ ಶೋಭಾ ಕರಂದ್ಲಾಜೆ ಕೈವಾಡ ಇದೆ ಎಂಬ "ಭೈರತಿ" ಸುರೇಶ್ ಆರೋಪಕ್ಕೆ ವಿಜಯೇಂದ್ರ ಕೆಂಡಾಮಂಡಲರಾಗಿದ್ದಾರೆ.

ಈ ಬಗ್ಗೆ X ಮಾಡಿರುವ ಅವರು, ಮಿಸ್ಟರ್ ಭೈರತಿ ಸುರೇಶ್ ಅವರೇ, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎನ್ನುವುದು ಗಾದೆ ಮಾತು, ಆದರೆ ನೀವು ಹಾಗೂ ನಿಮ್ಮ ಮುಖ್ಯಮಂತ್ರಿಗಳ ಮೈಯೆಲ್ಲಾ ಭ್ರಷ್ಟತೆಯ ಹುಣ್ಣು ತುಂಬಿಕೊಂಡು ನಾರುತ್ತಿದೆ.

ಒಂದರ ಮೇಲೊಂದು ತನಿಖೆಗಳು ನಡೆಯುತ್ತಲೇ ಇವೆ, ಕರ್ನಾಟಕದ ಇತಿಹಾಸದಲ್ಲಿ ಅನೈತಿಕತೆಯನ್ನು ಕತ್ತಿಗೆ ಕಟ್ಟಿಕೊಂಡು ಸರ್ಕಾರ ನಡೆಸುತ್ತಿರುವ ಇತಿಹಾಸ ನಿರ್ಮಿಸಿದ ದಾಖಲೆ ನಿಮಗೆ ಹಾಗೂ ನಿಮ್ಮ ಮುಖ್ಯಮಂತ್ರಿಗೇ ಸಲ್ಲುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

ನೀವು ನಡೆಸಿದ ಕಡು ಭ್ರಷ್ಟ ಹಗರಣಗಳಿಗೆ ಕನಸು ಮನಸ್ಸಿನಲ್ಲೂ ಎಣಿಸದ ರೀತಿಯಲ್ಲಿ ತನಿಖೆಗಳು ನಿಮ್ಮ ಕೊರಳು ಸುತ್ತಿ ಕೊಳ್ಳುತ್ತಿವೆ ಇದರಿಂದ ತೀವ್ರ ಹತಾಶಗೊಂಡಿದ್ದೀರಿ. ಮಾನ್ಯ ಶೋಭಾ ಕರಂದ್ಲಾಜೆ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲಾಗದ ನೀವು ಹೇಡಿಯಂತೆ ಕಪೋಲ ಕಲ್ಪಿತ ಆರೋಪಗಳನ್ನು ಮಾಡಿ ವಿಷಯಾಂತರ ಮಾಡಲು ಹೊರಟಿರುವ ನಿಮ್ಮ ನಡೆ "ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಗುಣವ ಬಿಡು ನಾಲಿಗೆ" ಎಂಬ ದಾಸರ ಪದವನ್ನು ನಿಮಗೆ ನೆನಪಿಸಿ ಹೇಳಬೇಕಾಗಿದೆ. ಮಾಡಿದ್ದುಣ್ಣೋ ಮಹರಾಯ ಎಂಬ ಮಾತಿನಂತೆ ಅತೀ ಶೀಘ್ರದಲ್ಲೇ ನಿಮ್ಮ ಹಾದಿ ಕೃಷ್ಣನ ಜನ್ಮಸ್ಥಾನದತ್ತ ಸಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ .








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo