ಉಡುಪಿ: ಹೊಟ್ಟೆ ನೋವಿನಿಂದ ಬಳಲಿ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ. 76 ಬಡಗಬೆಟ್ಟಿನ ಯಲ್ಲಪ್ಪ ಅವರ ಪುತ್ರಿ ಅಶ್ವಿನಿ (8) ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ್ದಾಳೆ.
ಬಾಲಕಿ ಕಳೆದೊಂದು ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಸೂಕ್ತ ಚಿಕಿತ್ಸೆಯ ಬಳಿಕ ಗುಣಮುಖಳಾಗಿ ದ್ದಳು. . ಅ. 9ರಂದು ಬೆಳಗ್ಗೆ ಮತ್ತೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯಾಧಿಕಾರಿಗಳು ತುರ್ತು ನಿಗಾ ಘಟಕದಲ್ಲಿ ದಾಖಲಿಸಿದ್ದರು. ಸ್ಪಲ್ಪ ಸಮಯದ ಬಳಿಕ ವೈದ್ಯಾಧಿಕಾರಿಗಳು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ