Slider

ಉಡುಪಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೆಸರಿನಲ್ಲಿ ನಕಲಿ ಖಾತೆ: ಪ್ರಕರಣ ದಾಖಲು

 


ಉಡುಪಿ: ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಕುರಿತು ಸಂಸದರ ವಕೀಲರಾದ ಶ್ಯಾಮಸುಂದರ ನಾಯರಿಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಸಾಮಾಜಿಕ ಜಾಲತಾಣಗಳಿಂದ ಅವರ ಫೋಟೋ ಹಾಗೂ ಮಾಹಿತಿಗಳನ್ನು ದುರುಪಯೋಗಪಡಿಸಿಕೊಂಡು ದುರುದ್ದೇಶಪೂರ್ವಕವಾಗಿ ಅಕ್ರಮ ಹಣವನ್ನು ಸಂಪಾದಿಸುವ ಉದ್ದೇಶದಿಂದ ಕೋಟ ಶ್ರೀನಿವಾಸ ಪೂಜಾರಿ ಹೆಸರನ್ನು ಕೆಡಿಸುವ ಉದ್ದೇಶದಿಂದ ನಕಲಿ ಖಾತೆಗಳನ್ನು ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ಕೋರಿಕೊಂಡಿದ್ದಾರೆ.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo