ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಚಿಂತನೆ
ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯು ಗೋವಾ ಮಾದರಿಯಲ್ಲಿ ಕರ್ನಾಟಕದ ಬೀಚ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ರಾಜ್ಯದ ಬೀಚ್ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ರಾಜ್ಯದ ಕರಾವಳಿಯ ಬೀಚ್ಗಳಲ್ಲಿ ಕೂಡ ಗೋವಾದ ಮಾದರಿಯಲ್ಲಿ ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ ಎನ್ನಲಾಗಿದೆ.
ಮಂಗಳೂರಿನಲ್ಲಿ ನಡೆದ 'ಕನೆಕ್ಟ್ 2024'ನಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆ.ವಿ. ಬೀಚ್ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದು ಹೇಳಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ