Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ನಟ ಸುದೀಪ್ ತಾಯಿ ವಿಧಿವಶ

Udupinews

 





ನಟ ಸುದೀಪ್ ತಾಯಿ ವಿಧಿವಶ 


ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಸರೋಜಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 7:04ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಇಂದು ಸಂಜೆ ಅಂತ್ಯ ಕ್ರಿಯೆ ನಡೆಯಲಿದೆ. ಸರೋಜಾ ಅವರು ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ.








0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo