ಉಡುಪಿ: ವಾಹನವೊಂದರಿಂದ ತೈಲ ಸೊರಿಕೆಯಾದ ಪರಿಣಾಮ ಹಲವು ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ಜಾರಿ ಬಿದ್ದ ಘಟನೆ ಸೋಮವಾರ ಸಂಜೆ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ ಯಲ್ಲಿ ನಡೆದಿದೆ.
ಅಪರಿಚಿತ ವಾಹನವೊಂದರಿಂದ ತೈಲವು ರಸ್ತೆಗೆ ಸೋರಿಕೆಯಾಗಿದ್ದು, ಇದರ ಮೇಲೆ ಚಲಿಸಿದ ನಾಲ್ಕೈದು ದ್ವಿಚಕ್ರ ವಾಹನಗಳು ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ.
ಸ್ಥಳಕ್ಕೆ ಧಾವಿಸಿದ ಸಂಚಾರಿ ಪೊಲೀಸರು ಕೂಡಲೇ ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರು.
ಅದರಂತೆ ಮಲ್ಪೆ ಅಗ್ನಿಶಾಮಕ ದಳದ ಜಲ ವಾಹನವು ಸ್ಥಳಕ್ಕೆ ಬಂದು ರಸ್ತೆಗೆ ನೀರು ಬಿಟ್ಟು ಎಣ್ಣೆ ಅಂಶವನ್ನು ಶುಚಿಗೊಳಿಸ ಲಾಯಿತು. ಬಳಿಕ ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ