Slider

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರಿಗೆ ಭಾರಿ ಅಂತರದ ಗೆಲುವು; ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿಶ್ವಾಸ

Udupinews

 





ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಹಾಗೂ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಿಶೋರ್ ಕುಮಾರ್ ಅವರನ್ನು ಗೆಲ್ಲಿಸಲು ಯೋಜನೆ, ಯೋಚನೆ ಮತ್ತು ಚಟುವಟಿಕೆಯನ್ನು ಈಗಾಗಲೇ ತಯಾರಿ ಆರಂಭಿಸಲಾಗಿದೆ. ಹಿಂದುಳಿದ ವರ್ಗ ಮತ್ತು ಸಣ್ಣ ಸಮುದಾಯಕ್ಕೆ ಸೇರಿದ ಯುವಕ ಕಿಶೋರ್ ಕುಮಾರ್ ಅವರು ಮುಂದೆ ವಿಧಾನ ಪರಿಷತ್ ಸದಸ್ಯನಾಗಿ ಅತ್ಯಂತ ಅರ್ಥಗರ್ಭಿತವಾಗಿ ಕೆಲಸ ಮಾಡುತ್ತಾರೆ. ಜನಸಾಮಾನ್ಯರ ಮತ್ತು ಬಡವರ ಪರ ಕೆಲಸ ಮಾಡು ತ್ತಾರೆ. ಅವರು ಕ್ರಾಂತಿಕಾರಿ ಶಕ್ತಿಯಾಗಿ ಮೂಡಿಬರಲಿದ್ದಾರೆ ಎಂಬ ವಿಶ್ವಾಸ ನಮಗಿದೆ ಎಂದರು. ಜಿಲ್ಲೆಯಲ್ಲಿ 6037 ಮತದಾರರು ಇದ್ದಾರೆ. ಈ ಪೈಕಿ ಬಿಜೆಪಿಯೂ ಮೂರುವರೆ ಸಾವಿರಕ್ಕೂ ಅಧಿಕ ಮತದಾರರರನ್ನು ಹೊಂದಿದೆ. ಕಿಶೋರ್ ನಾಮಪತ್ರ ಹಾಕಿರುವುದನ್ನು ಉಭಯ ಜಿಲ್ಲೆಯ ಮತದಾರರು ಅತ್ಯಂತ ಪ್ರೀತಿಯಿಂದ ಸ್ವಾಗತಿಸಿದ್ದಾರೆ. ಇದರಿಂದ ಬಿಜೆಪಿ ಗೆಲುವು ಖಚಿತ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಕಿಶೋರ್ ಕುಮಾರ್, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಬಿಜೆಪಿ ಧುರೀಣ ಸಂಜಯ್ ಪ್ರಭು ಸುದ್ದಿಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು.











0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo