ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ
ಚನ್ನಪಟ್ಟಣದ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸ್ಪಷ್ಟನೆ ನೀಡಿದರು.ಇಂದಿನ ಜೆಡಿಎಸ್ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು ಎಂದಿದ್ವಿ. ಆದರೆ ರಾಜ್ಯದಲ್ಲಿ ಎನ್ಡಿಎ ಬಲಿಷ್ಠವಾಗಬೇಕು.
ಈ ನಿಟ್ಟಿನಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವುದು ಅನಿವಾರ್ಯ ಎಂದು ಕಾರ್ಯಕರ್ತರೂ ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದರು.
ಸದ್ಯ ಚನ್ನಪಟ್ಟಣದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಅತ್ತ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಹಾಗೂ ಮೈತ್ರಿ ಅಭ್ಯರ್ಥಿ ನಿಖಿಲ್ ನಡುವೆ ನೇರ-ನೇರ ಫೈಟ್ ಏರ್ಪಡಲಿದೆ. ಇನ್ನು ಎನ್ಡಿಎ ನಾಯಕರು ಸೇರಿ ಅಧಿಕೃತವಾಗಿ ನಿಖಿಲ್ ಹೆಸರು ಕೆಲವೇ ಕ್ಷಣದಲ್ಲೇ ಘೋಷಣೆ ಮಾಡಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ