ಕುಂದಾಪುರ : ರೈಲು ಡಿಕ್ಕಿಯಾಗಿ ಚಿರತೆಯೊಂದು ಮೃತಪಟ್ಟಿರುವ ಕುಂದಾಪುರ ತಾಲೂಕಿನ ಘಟನೆ ನಾಡ ಗ್ರಾಮದ ಬಡಾಕೆರೆಯ ಸೌಪರ್ಣಿಕ ನದಿಗೆ ನಿರ್ಮಿಸಲಾದ ರೈಲ್ವೇ ಮೇಲ್ಸೇತುವೆಯಲ್ಲಿ ಸಂಭವಿಸಿದೆ.
ರೈಲ್ವೇ ಹಳಿ ದಾಟುವಾಗ ಈ ಅವಘಡ ಸಂಭವಿಸಿರಬಹುದು ಎಂದು ತಿಳಿದುಬಂದಿದೆ. ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಎಸಿಎಫ್ ಪ್ರಕಾಶ್ ಪೂಜಾರಿ, ಕುಂದಾಪುರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ, ಡಿಆರ್‌ಎಫ್‌ಒ ಮುರುಗನ್, ಬೀಟ್ ಫಾರೆಸ್ಟರ್ ರಾಮಪ್ಪ ಹಾಗೂ ಸಿಬಂದಿ ಚಿರತೆಯ ಮೃತದೇಹ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಬಳಿಕ ಕುಂದಾಪುರ ವಲಯ ಅರಣ್ಯ ಇಲಾಖೆಯ ವಂಡ್ಸೆ ಡಿಪ್ಪೋದಲ್ಲಿ ಚಿರತೆಯ ಅಂತ್ಯ ಸಂಸ್ಕಾರ ನಡೆಸಲಾಯಿತು.
ಉಡುಪಿ: ನವರಾತ್ರಿ ಹಬ್ಬದ ಪ್ರಯುಕ್ತ Ambalpady LED POINT ನಲ್ಲಿ ಗ್ರಾಹಕರಿಗೆ ಜೂಮರ್ ಶೋ ಲೈಟ್ ಮೇಳ
.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ