Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ: ಕತ್ತು ಸೀಳಿ ಯುವಕನ ಕೊಲೆ: ಆರೋಪಿಗೆ 14ದಿನಗಳ ನ್ಯಾಯಾಂಗ ಬಂಧನ

Udupinews

 







ಉಡುಪಿ: ಕತ್ತು ಸೀಳಿ ಯುವಕನ ಕೊಲೆ: ಆರೋಪಿಗೆ 14ದಿನಗಳ ನ್ಯಾಯಾಂಗ ಬಂಧನ


ಉಡುಪಿ: ಹಾಡಹಗಲೇ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿ ಹಣದ ವಿಚಾರದಲ್ಲಿ ಸ್ನೇಹಿತನನ್ನು ಕೊಲೆ ಮಾಡಿರುವ ಪ್ರಕರಣದ ಆರೋಪಿ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ನಿವಾಸಿ ದಿನೇಶ್ ಅಲಿಯಾಸ್ ವೀರಣ್ಣನನ್ನು ಉಡುಪಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಅ.22ರಂದು ಹಣದ ವಿಚಾರವಾಗಿ ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (38)ಯನ್ನು ವೀರಣ್ಣ ಕತ್ತು ಕೊಯ್ದು ಕೊಲೆ ಮಾಡಿದ್ದನು. ಬಳಿಕ ಸ್ವತಃ ತಾನೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಉಡುಪಿ ನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo